Thursday, December 23, 2010

Vishnu sahasranama 993-1000

ವಿಷ್ಣು ಸಹಸ್ರನಾಮ:
ಶಂಖಭೃನ್ನಂದಕೀ ಚಕ್ರೀ ಶಾರ್ಙ್ಗಧನ್ವಾ ಗದಾಧರಃ
ರಥಾಂಗಪಾಣಿರಕ್ಷೋಭ್ಯಃ ಸರ್ವಪ್ರಹರಣಾಯುಧಃ
ನಾಮಶ್ಲೋಕದ ಕೊನೆಯ ಈ ಶ್ಲೋಕದಲ್ಲಿ- ದುಷ್ಟಶಕ್ತಿಯ  ನಿರ್ನಾಮಕ್ಕಾಗಿ, ಪಾಪಿಗಳ ಸಂಹಾರಕ್ಕಾಗಿ, ಭಗವಂತ ಬಳಸುವ ಆಯುದಕ್ಕೆ ಸಂಬಂಧಪಟ್ಟ ಹೆಸರುಗಳಿವೆ.     
993) ಶಂಖಭೃತ್
ಶಂಖ ಬಹಳ ದೊಡ್ಡ ದುಷ್ಟ ಸಂಹಾರಕ ಶಕ್ತಿ. ಹಿಂದಿನ ಕಾಲದಲ್ಲಿ ಬೆಳಿಗ್ಗೆ ಮತ್ತು ಸಂಜೆ ತಪ್ಪದೆ ಮನೆಯಲ್ಲಿ, ಮನೆಯ ಮೂಲೆ-ಮೂಲೆಯಿಂದ, ಅಷ್ಟ ದಿಕ್ಕುಗಳಿಗೂ ಕೇಳುವಂತೆ ಶಂಖನಾದ ಮಾಡುತ್ತಿದ್ದರು. ಇದಕ್ಕೆ ಕಾರಣ ಶಂಖ ನಾದಕ್ಕೆ ದುಷ್ಟ ಶಕ್ತಿಯ ಎದೆಯೊಡೆಯುವ ಶಕ್ತಿ ಇದೆ. ಶಂಖದ ನಾದ ಎಲ್ಲಿಯವರೆಗೆ ಕೇಳಿಸುತ್ತದೋ, ಅಲ್ಲಿಯ ತನಕ ಯಾವ ದುಷ್ಟ ಶಕ್ತಿಗಳೂ ಸುಳಿಯಲಾರವು. ಇದೇ ಕಾರಣಕ್ಕಾಗಿ ದೇವಸ್ಥಾನಗಳಲ್ಲಿ ಗಂಟಾನಾದವನ್ನು ಮಾಡುತ್ತಾರೆ. ಗಂಟೆಯನ್ನು ನಿದಾನವಾಗಿ ಓಂ.ಽಽ..ಓಂ ಎನ್ನುವ ನಾದ ಬರುವಂತೆ ಮೆಲ್ಲಗೆ ಹೊಡೆಯಬೇಕು, ಶಂಖವನ್ನು ಓ..ಽಽ..ಮ್ ಎನ್ನುವಂತೆ ನಾದ ಮಾಡಬೇಕು. ಯುದ್ಧ ರಂಗದಲ್ಲಿ ಶಂಖನಾದ ಎದುರಿನ ಸೈನ್ಯೆಕ್ಕೆ ಸಿದ್ದತೆಯ ಸಂಕೇತ ಹಾಗು ತಮ್ಮ ಸೇನೆಗೆ ಸಿದ್ದವಿರುವಂತೆ ಆಜ್ಞೆ. ಶಂಖದ ಅಭಿಮಾನಿ ದೇವತೆ ಲಕ್ಷ್ಮಿ. ಆಕೆ ಸಂಪತ್ತಿನ ದೇವತೆಯಾದ ವೇದಮಾನಿನಿ. ಈ ಕಾರಣಕ್ಕಾಗಿ ಶಂಖ 'ಅರ್ಥ'ದ ಸಂಕೇತ ಕೂಡಾ ಹೌದು.  ಶಂಖವನ್ನು ತೊಟ್ಟ ಭಗವಂತ ಶಂಖಭೃತ್.
994) ನಂದಕೀ
ನಂದಕ ಎನ್ನುವ ಖಡ್ಗವನ್ನು ಹಿಡಿದ ಭಗವಂತ ನಂದಕೀ. ಖಡ್ಗದ ಅಭಿಮಾನಿ ದೇವತೆ ರಮೆ(ಭೂ ಮಾತೆ). ನಂದಕ ಎಂದರೆ ಆನಂದ. ದುಷ್ಟ ಶಕ್ತಿಯನ್ನು ಸಂಹಾರ ಮಾಡಿ ನಮಗೆ ಆನಂದ ಕೊಡುವ ಖಡ್ಗ ಹಿಡಿದ ಭಗವಂತ ನಂದಕೀ.  
995) ಚಕ್ರೀ
ಅಧರ್ಮ ನಾಶಕ್ಕಾಗಿ, ಧರ್ಮ ಸಂಸ್ಥಾಪನೆಗಾಗಿ  ಚಕ್ರ ಹಿಡಿದ ಭಗವಂತ ಚಕ್ರೀ. ಚಕ್ರ ಧರ್ಮದ ಸಂಕೇತ. ಚಕ್ರದ ಅಭಿಮಾನಿ ದೇವತೆ ದುರ್ಗೆ.  
996) ಶಾರ್ಙ್ಗಧನ್ವಾ
ಶಾರ್ಙ್ಗವೆಂಬ ಬಿಲ್ಲನ್ನು ಹೊತ್ತ ಭಗವಂತ ಶಾರ್ಙ್ಗಧನ್ವಾ. ಬಿಲ್ಲಿನ ಅಭಿಮಾನಿ ದೇವತೆ ಭಲ ಸ್ವರೂಪಿ ಪ್ರಾಣದೇವರು. ಶಾರ್ಙ್ಗ ಎಂದರೆ ತುತ್ತ ತುದಿ. ಆಯುದಗಳಲ್ಲೇ ಅತ್ಯಂತ ಹಿರಿದಾದ ಆಯುದ ಶಾರ್ಙ್ಗ. 
997) ಗದಾಧರಃ
ಸಂಯಮದ ಸಂಕೇತವಾದ ಗದೆಯನ್ನು ಧರಿಸಿದ ಭಗವಂತ ಗದಾಧರಃ. ಗದೆ ಸ್ವಚ್ಚಂದಕಾಮದ ನಿಯಂತ್ರಣದ ಸಂಕೇತ. ಗದೆಯ ಅಭಿಮಾನಿ ದೇವತೆ 'ಪ್ರಾಣ'. 
998) ರಥಾಂಗಪಾಣಿಃ
ಮಹಾಭಾರತ ಯುದ್ಧದಲ್ಲಿ ರಥದ ಗಾಲಿಯನ್ನು ಆಯುದವಾಗಿ ಹಿಡಿದ ಭಗವಂತ ರಥಾಂಗಪಾಣಿಃ. ಇದು ಮಹಾಭಾರತ ಯುದ್ಧದಲ್ಲಿ ಅರ್ಜುನ ಮತ್ತು  ಭೀಷ್ಮ ಪಿತಾಮಹರ ನಡುವೆ ಯುದ್ಧ  ಪ್ರಾರಂಭವಾದಾಗ ನಡೆದ ಒಂದು ಘಟನೆ. ಅರ್ಜುನ ತನ್ನನ್ನು ಮುದ್ದಿಸಿ ಆಡಿಸಿ ಬೆಳೆಸಿದ ಪಿತಾಮಹನೊಂದಿಗೆ ಮನಸ್ಸಿಲ್ಲದ ಮನಸ್ಸಿನಿಂದ ಯುದ್ಧ ಮಾಡುತ್ತಿರುತ್ತಾನೆ.  ಇದನ್ನು  ಗಮನಿಸಿದ  ಸಾರಥಿ  ಕೃಷ್ಣ  ಕೋಪಗೊಳ್ಳುತ್ತಾನೆ. ಮಹಾಭಾರತ ಯುದ್ಧದ ಮೊದಲು ತಾನು ಶಸ್ತ್ರ ಹಿಡಿಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದ ಕೃಷ್ಣ, ಕೋಪಾವೇಶದಿಂದ  ಭೀಷ್ಮನನ್ನು ಸಾಯಿಸಲೆಂಬಂತೆ ರಥದಚಕ್ರವೊಂದನ್ನು ಹಿಡಿದು ಮುಂದೊತ್ತಿ ಬರುತ್ತಾನೆ! ಇದನ್ನು ನೋಡಿದ ಬೀಷ್ಮ  ತನ್ನ ಎರಡೂ ಕೈಗಳನ್ನು ಜೋಡಿಸಿ  ಹೀಗೆ ಹೇಳುತ್ತಾನೆ: 
" ಓ ಭಗವಂತ; ನಿನ್ನ ಕೈಯಲ್ಲಿ ಚಕ್ರ ಹಿಡಿಸುತ್ತೇನೆ, ಹಾಗೆ ಯುದ್ಧ ಮಾಡುತ್ತೇನೆ ಎಂದು ನಾನು ಪ್ರತಿಜ್ಞೆ ಮಾಡಿದ್ದೆ.  ಚಕ್ರ ಹಿಡಿಯುವುದಿಲ್ಲ ಎಂದಿದ್ದೆ ನೀನು. ಆದರೆ ಈಗ ನನ್ನ ಪ್ರತಿಜ್ಞೆಯನ್ನು ಈಡೇರಿಸಲು ನೀನು ಚಕ್ರ ಹಿಡಿದಿರುವೆ. ನಿನ್ನನ್ನೇ ನೀನು ಮರೆತಿರುವೆ, ಆದರೆ  ನಿನ್ನ ಭಕ್ತನನ್ನು  ಮರೆತಿಲ್ಲ; ನೀನಲ್ಲದೆ  ನಮಗೆ  ಗತಿ ಇನ್ಯಾರು? "ಎನ್ನುತ್ತಾನೆ.  ಈ ಘಟನೆಯಲ್ಲಿ ಲೋಕಕಲ್ಯಾಣಕ್ಕಾಗಿ ಭಗವಂತನ ಕೋಪ ಮತ್ತು ಅದರ ಹಿಂದಿರುವ ಕರುಣೆ  ವ್ಯಕ್ತವಾಗಿದೆ.
ರಥಾಂಗರು  ಎಂದರೆ ಪಾಂಡವರು ಅಥವಾ ಧರ್ಮ ಯುದ್ಧ ಮಾಡುವವರು, ಅಂಥವರಿಗೆ 'ಆಣಿ' ಅಂದರೆ ಆಧಾರವಾಗಿ ನಿಲ್ಲುವ ಭಗವಂತ ರಥಾಂಗಪಾಣಿಃ.
999) ಅಕ್ಷೋಭ್ಯಃ
ಯಾರೂ ಮಣಿಸಲಾಗದ, ಕಂಗೆಡಿಸಲಾಗದ, ಯಾವ ಸಂಧರ್ಭದಲ್ಲೂ ಎದೆಗೆಡದ, ಎಂದೂ ನಿರ್ದಾರ ಬದಲಿಸದ ಸರ್ವಸಮರ್ಥ ಭಗವಂತ ಅಕ್ಷೋಭ್ಯಃ.   
1000) ಸರ್ವಪ್ರಹರಣಾಯುಧಃ
ದುಷ್ಟರ ದಮನಕ್ಕಾಗಿ ಎಲ್ಲಾ ಶಸ್ತ್ರಾಸ್ತ್ರಗಳನ್ನು ಆಯುಧವಾಗಿ ತೊಟ್ಟ ಭಗವಂತ ಸರ್ವಪ್ರಹರಣಾಯುಧಃ.
|| ಸರ್ವಪ್ರಹರಣಾಯುಧೋಂ ನಮಃ ಇತಿ ||
ಎಲ್ಲಾ ಶಸ್ತ್ರಾಸ್ತ್ರಗಳನ್ನು ಆಯುಧವನ್ನಾಗಿ ತೊಟ್ಟವನೆ ಓಂಕಾರವಾಚ್ಯನಾದವನು   ಎನ್ನುತ್ತ ಇದು ಅವನಿಗೆ ಅರ್ಪಿತವಾಗಿದೆ    

9 comments:

  1. For devotees like me who can not read Kannada but eager to understand how Sri
    Madhvaacharya has made His Bhashyam on Vishnu Sahasranaama( atleast short meanings for each Naamaa), an English publication may kindly be made. We get only Sankara & Paraasara Bhattaa Bhashya books only in the market. Hence my humble request. Namaskaaraa.

    ReplyDelete
  2. hari hara putra shastana bagge tilisi koduvira? shasta mattu ayyappa ibbarige enadru sambandhavideya?

    ReplyDelete
  3. thank u ,
    Vishnu sahasra nama janasamanyarellaru sulaba vagi artha maadikollo reetiyalli vistara vaagi antarjaala putadalli tumba chennagi vivarisiddiri.
    yellarigu Vishnu sahasra naama da fala sigali. namaskara.

    ReplyDelete
  4. Dhanyavada. Vishnu Sahasranamam pathisuvavarige Mattu bhagavadgeeteya jijnasugalige upayukta blog. Bannanjeyavara vyakhyanada sobagu adbhuta. Namonamaha

    ReplyDelete
  5. In the e-book it is printed as पुनरेवाभ्यभ्याषत it should be पुनरेवाभ्यभाषत

    ReplyDelete
  6. Where can I get bannanje cd of vishnusahasranama .. I'm from mandya is there available online.... Please kindly requesting help me

    ReplyDelete
  7. Hello sir,,thumba chennagidhey nimma ee vishnu sahasranamada presentation,,thumba hardwork kaanisuthey..neat printing of words..nammelarigu,sri hari vaayu gurugalu sanmangala untu maadali..

    ReplyDelete